ಸಂಸದೆ ರಮಾದೇವಿ ವಿರುದ್ಧ ಅಜಂ ಖಾನ್ ಹೇಳಿಕೆ : ತಿರುಗಿ ಬಿದ್ದ ಸಂಸತ್

ಈ ಸುದ್ದಿಯನ್ನು ಶೇರ್ ಮಾಡಿ

ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರು ಗುರುವಾರ ಲೋಕಸಭೆಯಲ್ಲಿ ಬಿಹಾರ ಬಿಜೆಪಿ ಸಂಸದೆ ಉಪ ಸಭಾಪತಿ ರಮಾದೇವಿ ಅವರ ಕುರಿತು ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಶುಕ್ರವಾರ ಮಹಿಳಾ ಸಂಸದರು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಖಾನ್ ಅವರು ಈ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರನ್ನು ಸದನದಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.ಈ ಕುರಿತು ನಾನು ಸರ್ವಪಕ್ಷ ನಾಯಕರ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರು ಹೇಳಿದ್ದಾರೆ.


ತ್ರಿವಳಿ ತಲಾಖ್ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಇತರ ಸದಸ್ಯರ ಗದ್ದಲಕ್ಕೆ ಗಮನಕೊಡದೇ ತಮ್ಮನ್ನು ಉದ್ದೇಶಿಸಿ ಮಾತನಾಡುವಂತೆ ಸ್ಪೀಕರ್ ಅನುಪಸ್ಥಿತಿಯಲ್ಲಿ ಕಲಾಪ ನಡೆಸುತ್ತಿದ್ದ ಬಿಜೆಪಿ ಸಂಸದೆ ರಮಾದೇವಿ ಅವರು ಅಜಂ ಖಾನ್ ಅವರಿಗೆ ಸೂಚಿಸಿದ್ದಾರೆ.ಈ ವೇಳೆ ರಮಾದೇವಿಯವರನ್ನು ಉದ್ದೇಶಿಸಿ ಮಾತನಾಡಿದ ಅಜಂ ಖಾನ್, ‘ಆಪ್ ಕೀ ಆಂಖೋ ಮೇ ಆಂಖೇ ಡಾಲ್ ಕೇ ಬಾತ್ ಕರ್ ನೇ ಕಾ ಮನ್ ಕರ್ ತಾ ಹೈ’ (ನಿಮ್ಮ ಕಣ್ಣಲ್ಲಿ ಕಣ್ಣನಿಟ್ಟು ಮಾತನಾಡುವ ಬಯಕೆ ಉಂಟಾಗುತ್ತಿದೆ) ಎಂದು ಹೇಳಿಕೆ ನೀಡಿದ್ದರು.

Loading...

Leave a Reply

Your email address will not be published. Required fields are marked *