ಡಿಕೆಶಿ ರಾತೋರಾತ್ರಿ ನಡೆಸಿದ ಪ್ರಯತ್ನ ವ್ಯರ್ಥ : ಮುಂಬೈಗೆ ಹಾರಿದ ಎಂಟಿಬಿ ನಾಗರಾಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಸದನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಶ್ವಾಸಮತ ಯಾಚಿಸುವ ಕುರಿತು ಘೋಷಣೆ ಮಾಡಿದ ನಂತರದ ಬೆಳವಣಿಗೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸಲು ಅಖಾಡಕ್ಕೆ ಇಳಿದ ಟ್ರಬಲ್ ಶೂಟರ್ ಖ್ಯಾತಿಯ ಡಿಕೆ ಶಿವಕುಮಾರ್ ಅವರು ರಾತೋರಾತ್ರಿ ಶಾಸಕ ಎಂಟಿಬಿ ನಾಗರಾಜ್ ಅವರ ಮನೆಗೆ ಭೇಟಿ ನೀಡಿ ಹಲವು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕುಮಾರಸ್ವಾಮಿಯವರು ಎಂಟಿಬಿ ನಾಗರಾಜ್ ಅವರ ಮನವೊಲಿಸಿದ್ದರು ತಮ್ಮ ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟ ಹೇಳಿಕೆ ನೀಡದ ಎಂಟಿಬಿ ನಾಗರಾಜ್ ಅವರು ಇಂದು ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಮುಂಬಯಿಗೆ ತೆರಳಿದ್ದು ಅತೃಪ್ತ ಶಾಸಕರ ಗುಂಪನ್ನು ಸೇರಿದ್ದಾರೆ.ನಾಗರಾಜ್ ಅವರಿಗೆ ಆರ್ ಅಶೋಕ್ ಸಾಥ್ ನೀಡಿದ್ದಾರೆ. ಒಟ್ಟಾರೆ ಬೆಳವಣಿಗೆಯನ್ನು ಗಮನಿಸಿದರೆ ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆ ಮಾಡದೆ ವಿದಾಯ ಭಾಷಣ ಮಾಡಿ ರಾಜ್ಯಪಾಲರಿಗೆ ರಾಜೀನಾಮೆ ನೀಡುವುದು ಬಹುತೇಕ ಖಚಿತವೆನಿಸಿದೆ.

Loading...

Leave a Reply

Your email address will not be published. Required fields are marked *