ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ :ಜುಲೈ17 ರಂದು ಸೋನ್‌ಭದ್ರಾ ಪ್ರದೇಶದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿ ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಗಳನ್ನು ಭೇಟಿಯಾಗಲು ಬಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಶುಕ್ರವಾರ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ .ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರು ಸೋನಾ ಭದ್ರಾ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಾದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಸೆಕ್ಷನ್ ರ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಇನ್ನು ಪ್ರಿಯಾಂಕ ಗಾಂಧಿ ಬಂಧನವನ್ನು ರಾಹುಲ್ ಗಾಂಧಿ ಖಂಡಿಸಿದ್ದು ನಾನು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ .ಇನ್ನು ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಗಳನ್ನು ಭೇಟಿಯಾಗಲು ಬಂದಿದ್ದೇವೆ ಆದರೆ ಪೊಲೀಸರು ನಮ್ಮನ್ನು ತಡೆದು ಎಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ ಗೊತ್ತಿಲ್ಲ ಇದಕ್ಕೆಲ್ಲ ಹೆದರುವುದಿಲ್ಲ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *