ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದರೊಂದಿಗೆ ಆರು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜನಾರ್ದನ ರೆಡ್ಡಿ ತಮ್ಮ ತವರೂರು ಬಳ್ಳಾರಿಗೆ ತೆರಳಲು ಅವಕಾಶ ದೊರೆತಂತಾಗಿದೆ.ಬಳ್ಳಾರಿ ಪ್ರವೇಶಿಸಲು ಅನುಮತಿ ಕೋರಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸದ ಸುಪ್ರೀಂ ಕೋರ್ಟ್ ರಜಾಕಾಲದ ಪೀಠ, ಜೂನ್ 8ರಿಂದ ಎರಡು ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ಭೇಟಿ ಮಾಡುವ ಸಲುವಾಗಿ ಬಳ್ಳಾರಿ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೋರಿ ರೆಡ್ಡಿ ಗುರುವಾರ ಅರ್ಜಿ ಸಲ್ಲಿಸಿದ್ದರು.

Loading...

Leave a Reply

Your email address will not be published. Required fields are marked *