ರಾಮ ಮಂದಿರ ಕುರಿತಾದ ಎಲ್ಲಾ ಅಡೆತಡೆಗಳನ್ನು ನಿವಾರಣೆ ಮಾಡಲಾಗುವುದು :ಯೋಗಿ ಆದಿತ್ಯನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಧು ಸಂತರನ್ನು ಉದ್ದೇಶಿಸಿ ಅಯೋಧ್ಯೆಯಲ್ಲಿ ಮಾತನಾಡುತ್ತಾ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಡೆತಡೆಗಳನ್ನು ಶೀಘ್ರದಲ್ಲಿ ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.ಅಯೋಧ್ಯೆಯಲ್ಲಿ ಶುಕ್ರವಾರ ಮಹಾಂತ ನೃತ್ಯ ಗೋಪಾಲ್ ದಾಸ್ ಅವರ 81 ನೇ ಹುಟ್ಟುಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ವೇಳೆ ಈ ಹೇಳಿಕೆ ನೀಡಿದ್ದಾರೆ.ಲೋಕಸಭಾ ಚುನಾವಣೆಯ ನಂತರ ಇದೆ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

Loading...

Leave a Reply

Your email address will not be published. Required fields are marked *